ಮೈಸೂರು:ಕಾಂಗ್ರೆಸ್-ಜೆಡಿಎಸ್ ಪರಸ್ಪರ ಅಪಘಾತವಾಗದೇ ಮುನ್ನಡೆದರೆ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಪರಸ್ಪರ ಅಪಘಾತವಾಗದೇ ಇದ್ದರೆ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ: ಹೆಚ್.ವಿಶ್ವನಾಥ್ - kannadanews
ಕಾಂಗ್ರೆಸ್- ಜೆಡಿಎಸ್ ಪರಸ್ಪರ ಅಪಘಾತವಾಗದೇ ಮುನ್ನಡೆದರೆ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ ಮಧ್ಯಂತರ ಚುನಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್ ಅವರು, ಮಾಜಿ ಪ್ರಧಾನಿಗಳು ತಮ್ಮ ಅನುಭವದ ಮಾತುಗಳನ್ನಾಡಿದ್ದಾರೆ. ಅದರಲ್ಲಿ ಸತ್ಯ ಇರಬಹುದು. ಕಾಂಗ್ರೆಸ್-ಜೆಡಿಎಸ್ ಅಪಘಾತವಾಗದೇ ಹೋದರೆ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ರಾಜ್ಯದ ಹಿತದೃಷ್ಟಿಯಿಂದ ಮೂರು ಪಕ್ಷಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಬ್ಬರು ಅನುಭವಿ ರಾಜಕಾರಣಿಗಳು. ನನ್ನ ಸಲಹೆ ಅವರಿಗೆ ಅಗತ್ಯವಿಲ್ಲ. ಸಮ್ಮಿಶ್ರ ಸರ್ಕಾರ ನಡೆದುಕೊಂಡು ಹೋಗುತ್ತದೆ ಎಂದು ವಿಶ್ವನಾಥ್ ತಿಳಿಸಿದ್ರು.