ಕರ್ನಾಟಕ

karnataka

ETV Bharat / state

ಜೆಡಿಎಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು ತಾಲೂಕಿನ ಉದ್ಬೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಜಿ.ಟಿ‌.ದೇವೇಗೌಡ ಚಾಲನೆ ನೀಡಿದರು.

mysore
ಶಾಸಕ ಜಿ.ಟಿ.ದೇವೇಗೌಡ

By

Published : Nov 23, 2020, 3:53 PM IST

ಮೈಸೂರು:ಜೆಡಿಎಸ್ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ, ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುತ್ತೇನಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ‌.ದೇವೇಗೌಡ ತಿಳಿಸಿದರು.

ಮೈಸೂರು ತಾಲೂಕಿನ ಉದ್ಬೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್,‌ ಬಿಜೆಪಿ, ಕಾಂಗ್ರೆಸ್ ಈ ಮೂರು ಪಕ್ಷಗಳು ಹೇಗಿರುತ್ತದೆ ಎನ್ನುವುದನ್ನು‌ ಕಾದು ನೋಡುತ್ತೇನಿ. ನನ್ನ ರಾಜಕೀಯ ನಿಲುವಿನ ಬಗ್ಗೆ ಕ್ಷೇತ್ರದ ಜನರೊಂದಿಗೆ ಸಮಾಲೋಚಿಸಿ ನಿರ್ಧಾರ ಮಾಡುತ್ತೇನೆ ಎಂದರು.

ಶಾಸಕ ಜಿ.ಟಿ.ದೇವೇಗೌಡ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕ್ಷೇತ್ರ ಮುಖಂಡರ ಹಾಗೂ ಜನರೊಂದಿಗೆ ಚರ್ಚಿಸದೇ, ಯಾವ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಅವತ್ತಿನ ರಾಜಕೀಯ ಚಿತ್ರಣ ಹೇಗಿರುತ್ತದೆ ಎನ್ನುವುದನ್ನು ಕಾದು ನೋಡಿ ತೀರ್ಮಾನ ಮಾಡುತ್ತೇನಿ ಎಂದು ಸ್ಪಷ್ಟ ಪಡಿಸಿದರು. ಗ್ರಾಪಂ ಚುನಾವಣೆಯು ಪಕ್ಷಾತೀತವಾಗಿ ನಡೆಯಬೇಕು. ಯಾರು‌ ಜನ ಸೇವೆ ಮಾಡುತ್ತಾರೆ ಅವರನ್ನು ಗುರುತಿಸಿ ಆಯ್ಕೆ ಮಾಡಿ ಕಳುಹಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ABOUT THE AUTHOR

...view details