ಮೈಸೂರು:ಕಳೆದ ರಾತ್ರಿ ವೈದ್ಯ ದಂಪತಿ ಮೇಲೆ ಹಲ್ಲೆ ಮಾಡಿ ಕಳ್ಳರು ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ವಿಜಯನಗರ ವಾಟರ್ ಟ್ಯಾಂಕ್ ಬಳಿ ನಡೆದಿದೆ.
ವೈದ್ಯ ದಂಪತಿ ಮೇಲೆ ಹಲ್ಲೆ: ಚಿನ್ನಾಭರಣ ಕದ್ದು ಖದೀಮರು ಪರಾರಿ - ವೈದ್ಯ ದಂಪತಿ ಮನೆಯಲ್ಲಿ ಕಳ್ಳತನ
ಮೈಸೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ವೈದ್ಯ ದಂಪತಿ ಮನೆಯಲ್ಲಿ ಕಳ್ಳರು ಕಳ್ಳತನ ಮಾಡ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
Thieves attack on couple and theft jewellery in Mysore
ಕಳೆದ ರಾತ್ರಿ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಟರ್ ಟ್ಯಾಂಕ್ ಬಳಿಯಿರುವ ಕೇಶವ್ ರಾಯಚೂರಕರ ಎಂಬ ವೈದ್ಯರ ಮನೆಗೆ ಖದೀಮರು ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಹಲ್ಲೆಯಲ್ಲಿ ಗಾಯಗೊಂಡ ವೈದ್ಯ ದಂಪತಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.