ಮೈಸೂರು: ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಈ ಬಾರಿ ಸರಳ ದಸರಾ ಆಚರಣೆ: ಸಿಎಂ ಬಿಎಸ್ವೈ - ಈ ಬಾರಿ ಸರಳ ದಸರಾ ಆಚರಣೆ ಸಿಎಂ ಬಿಎಎಸ್ವೈ ಮಾಹಿತಿ
ಸರಳವಾಗಿ ದಸರಾ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
![ಈ ಬಾರಿ ಸರಳ ದಸರಾ ಆಚರಣೆ: ಸಿಎಂ ಬಿಎಸ್ವೈ This year Simple Dasara celebration Says CM BSY](https://etvbharatimages.akamaized.net/etvbharat/prod-images/768-512-8502663-296-8502663-1597998097476.jpg)
ಕಬಿನಿ ಜಲಾಶಯ ಬಳಿಯ ಹೆಲಿಪ್ಯಾಡ್ನಲ್ಲಿ ಮಾತನಾಡಿದ ಅವರು, ಸರಳವಾಗಿ ದಸರಾ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ದಸರಾ ಉನ್ನತ ಮಟ್ಟದ ಸಮಿತಿ ಸಭೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಮಾಡುತ್ತೇವೆ ಎಂದರು.
ನಂಜನಗೂಡು ಟಿಹೆಚ್‌ಒ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ ಪರಿಹಾರ ಘೋಷಣೆ ಮಾಡಿದ್ದೇವೆ. ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು. ರಾಜ್ಯಾದ್ಯಂತ ಉತ್ತಮವಾಗಿ ಮಳೆ ಆಗಿದೆ. ಇದರಿಂದಾಗಿ ಅಂತರ್ಜಲ ಮಟ್ಟ ಕುಸಿಯುವುದು ತಪ್ಪಿದೆ. ಎಲ್ಲಾ ಕಡೆ ಬೀಜ ಬಿತ್ತನೆ ನಡೆಯುತ್ತಿದೆ. ಇಂದು ಕಬಿನಿಗೆ ಬಾಗಿನ ಅರ್ಪಿಸಲು ಬಂದಿದ್ದೇವೆ. ಜಲಾಶಯಗಳು ಭರ್ತಿಯಾಗಿದ್ದು ಸುದೈವ ಎಂದರು.