ಕರ್ನಾಟಕ

karnataka

ETV Bharat / state

ವಿದ್ಯುತ್​ ತಂತಿ ತಗುಲಿ ಮೂವರು ಕೂಲಿ ಕಾರ್ಮಿಕರ ದುರ್ಮರಣ..! - Three workers died

ಟಿ ನರಸೀಪುರ ತಾಲೂಕಿನಲ್ಲಿ ಲಾರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ.

Three workers died in Mysore
ಕೂಲಿ ಕಾರ್ಮಿಕರುದುರ್ಮರಣ

By

Published : May 21, 2020, 5:23 PM IST

ಮೈಸೂರು: ಮೆಕ್ಕೆಜೋಳ ಹೇರಿಕೊಂಡು ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಟಿ‌.ನರಸೀಪುರ ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದಿದೆ.

ಮೆಕ್ಕೆಜೋಳ ಹೇರಿಕೊಂಡು ತೆರಳುತ್ತಿದ್ದ ಲಾರಿ

ಟಿ ನರಸೀಪುರ ತಾಲೂಕಿನ ಹೊಸೂರು ಗ್ರಾಮದ ಮಹದೇವು, ತೇಜು ಮತ್ತು ಮಹದೇವ್ ನಾಯಕ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಕೂಲಿ ಕಾರ್ಮಿಕರೆಂದು ತಿಳಿದು ಬಂದಿದೆ.

ಮೆಕ್ಕೆಜೋಳದ ಮೇವು ತುಂಬಿದ್ದ ಲಾರಿಗೆ ವಿದ್ಯುತ್ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಕೂಲಿ ಕಾರ್ಮಿಕರರಿಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವ ಕೂಲಿ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾನೆ ಎನ್ನಲಾಗುತ್ತಿದೆ.

ಕೂಲಿ ಕಾರ್ಮಿಕರುದುರ್ಮರಣ

ಕೀಳನಪುರದಿಂದ ಪಿಂಜರಾಪೂಲಿಗೆ ಮೇವು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವರುಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ABOUT THE AUTHOR

...view details