ಮೈಸೂರು : ಇಂದು ಬಿಜೆಪಿಯ ಮೂರನೇ ಪಟ್ಟಿ ಪ್ರಕಟವಾಗಿದ್ದು ಮೈಸೂರಿನ ಕೆ.ಆರ್.ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್ಗೆ ಟಿಕೆಟ್ ಕೈತಪ್ಪಿದ್ದು, ಹಾಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಸ್.ಎ.ರಾಮದಾಸ್ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದು ಸಂತೋಷ ತಂದಿದೆ ಎಂದರು.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು ನಗರದ ಕೆ.ಆರ್.ಕ್ಷೇತ್ರಕ್ಕೆ ಬಿ.ಎಲ್.ಸಂತೋಷ್ ಆಪ್ತ ಶ್ರೀವತ್ಸ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮೈಸೂರು ನಗರ ಬಿಜೆಪಿ ಕಛೇರಿಯಲ್ಲಿ ಸಿಹಿ ಸಂಭ್ರಮಾಚರಣೆ ಮಾಡಲಾಯಿತು. ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವತ್ಸ, ಸಾಮಾನ್ಯ ಕಾರ್ಯಕರ್ತನಿಗೆ ನೀಡಿದ್ದು ಸಂತೋಷವಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ. ನನ್ನನ್ನು ಗುರುತಿಸಿದ್ದಕ್ಕೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.