ಮೈಸೂರು:ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲೂಕು ಎನ್.ಬೇಗೂರು ವನ್ಯಜೀವಿ ವಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಕಳೇಬರ ಪತ್ತೆಯಾಗಿದೆ.
ಬಂಡೀಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆ - Tiger deaths in Bandipur, Mysuru
ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲೂಕು ಎನ್.ಬೇಗೂರು ವನ್ಯಜೀವಿ ವಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಕಳೇಬರ ಪತ್ತೆಯಾಗಿದೆ.
ಐದು ದಿನಗಳ ಹಿಂದೆ ಹುಲಿ ಮೃತಪಟ್ಟಿದ್ದು, ಅಂದಾಜು 8 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ದೇಹದ ಅಂಗಾಂಗಗಳನ್ನು ಬೇರೆ ಪ್ರಾಣಿಗಳು ತಿಂದು ಹಾಕಿದ್ದರಿಂದ ಗಂಡೋ ಅಥವಾ ಹೆಣ್ಣೋ ಎಂದು ಖಚಿತವಾಗಿ ಹೇಳಲು ಸಾಧ್ಯವಾಗುತ್ತಿಲ್ಲ. ಕುತ್ತಿಗೆ ಬಳಿ ಮತ್ತೊಂದು ಹುಲಿ ಕಚ್ಚಿದ ಗಾಯಗಳು ಕಂಡು ಬಂದಿದೆ. ಎಡಗಾಲಿನ ಮೂಳೆ ಮುರಿದಿದೆ, ಜೊತೆಗೆ ಒಂದು ಕಾಲು ಮುರಿದಿದೆ ಎಂದು ಪಶು ವೈದ್ಯ ಡಾ.ನಾಗರಾಜ್ ತಿಳಿಸಿದ್ದಾರೆ.
ಮೃತಪಟ್ಟಿರುವ ಹುಲಿಯು ಮತ್ತೊಂದು ಹುಲಿಯೊಂದಿಗೆ ಕಾದಾಡಿ ಗಾಯಗೊಂಡು ಸಾವನ್ನಪ್ಪಿದೆ ಎಂದು ಶಂಕಿಸಲಾಗಿದೆ. ಅಳಿದುಳಿದಿರುವ ಅಂಗಾಂಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ನಿರ್ದೇಶಕ ಬಾಲಚಂದ್ರ, ಎಸಿಎಫ್ ಮೋಹನ್ಕುಮಾರ್, ಆರ್ಎಫ್ಒ ಸಚಿನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.