ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ವರ್ಷದಿಂದ ವರ್ಷಕ್ಕೆ ಹುಲಿಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹುಲಿ ಗಣತಿಯಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ.
2018ರ ಹುಲಿ ಗಣತಿ ವರದಿ ಪ್ರಕಾರ ಮಧ್ಯಪ್ರದೇಶ 526 ಹುಲಿಗಳನ್ನು ಹೊಂದಿದ್ದರೆ, ಕರ್ನಾಟಕ 524 ಹುಲಿಗಳ ಮೂಲಕ ಎರಡನೇ ಸ್ಥಾನಕ್ಕೆ ಜಿಗಿದಿತ್ತು. ಹುಲಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗಲು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಸ್ಯಾಹಾರಿ ಪ್ರಾಣಿಗಳ ಸಂಖ್ಯೆ ಏರಿಕೆಯಾಗಬೇಕು.