ಮೈಸೂರು: ಜುಬಿಲಂಟ್ ಕಾರ್ಖಾನೆಯ ಮೊದಲ ಸೋಂಕಿತನ ದ್ವಿತೀಯ ಸಂಪರ್ಕದಿಂದ ಮತ್ತೆ ನಾಲ್ವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 80ಕ್ಕೆ ಏರಿದೆ. ನಂಜನಗೂಡಿನ ಜುಬಿಲಂಟ್ ಕಾರ್ಖಾನೆಯ ಮೊದಲ ಕೊರೋನಾ ಸೋಂಕಿತ, ಪಿ52 ಸಂಪರ್ಕದಿಂದ ಆತನ ಪತ್ನಿ ಸೇರಿದಂತೆ ಒಟ್ಟು 4 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ನಂಜನಗೂಡು 'ನಂಜು': ಮೈಸೂರಿನಲ್ಲಿ ಮತ್ತೆ 4 ಜನರಿಗೆ ಕೊರೊನಾ ದೃಢ - 80 positive cases in Mysore
ಇಂದು ಮೈಸೂರಿನಲ್ಲಿ ಮತ್ತೆ 4 ಪ್ರಕರಣಗಳು ಪಾಸಿಟಿವ್ ಬಂದಿವೆ. ಒಟ್ಟು 80 ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಅದರಲ್ಲಿ 22 ಜನ ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೈಸೂರಿನಲ್ಲಿ ಮತ್ತೆ 4 ಜನರಿಗೆ ಕೊರೊನಾ ದೃಢ
ಜಿಲ್ಲೆಯಲ್ಲಿ ಸಂಜೆ ಬಿಡುಗಡೆಯಾದ ಕೊರೋನಾ ಸೋಂಕಿತರ ಮಾಧ್ಯಮ ಪ್ರಕಟಣೆಯಲ್ಲಿ ಮತ್ತೆ 4 ಪ್ರಕರಣಗಳು ಪಾಸಿಟಿವ್ ಬಂದಿವೆ. ಒಟ್ಟು 80 ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು , ಅದರಲ್ಲಿ 22 ಜನ ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅದರಲ್ಲಿ ಮೊದಲ ಸೋಂಕಿತ ಪಿ-52 ಸಹ ಸೇರಿದ್ದು, ಈಗ ನಗರದ ಕೋವಿಡ್ ಆಸ್ಪತ್ರೆಯಲ್ಲಿ 58 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.