ಮೈಸೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಎಸ್.ಟಿ.ಸೋಮಶೇಖರ್ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಕೊರೊನಾದಿಂದ ಗುಣಮುಖರಾಗಿ ಮನೆಗೆ ಮರಳಿದ ಎಸ್.ಟಿ.ಸೋಮಶೇಖರ್ - S t somashekar covid news
ಮೈಸೂರು ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು ಮನೆಗೆ ತೆರಳಿದ್ದಾರೆ.
Somashekar
ಮೈಸೂರು ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಈ ಹಿನ್ನಲೆ ಸಂಪೂರ್ಣ ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.
ಇನ್ನು ಕೊರೊನಾ ಸೋಂಕಿನಿಂದ ಮುಖ್ಯಮಂತ್ರಿಗಳು, ಶಾಸಕರು, ಸಚಿವರು, ಆಪ್ತರು ಹಾಗೂ ಜನರು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿದ್ದಾರೆ. ಜೊತೆಗೆ ಮತ್ತೆ ಜನಸೇವೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.