ಮೈಸೂರು: ರಾಯಚೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಪಡುವಾರಹಳ್ಳಿ ಗ್ರಾಮದಲ್ಲಿ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ ಹವ್ಯಾಸಿ ಕಲಾ ಸಂಘ, ಪಡುವಾರಳ್ಳಿ ಗ್ರಾಮ ವತಿಯಿಂದ ಗ್ರಾಮದಲ್ಲಿರುವ ಅಂಬೇಡ್ಕರ್ ಪುತ್ಥಳಿಯಿಂದ ಪಂಜಿನ ಮೆರವಣಿಗೆ ಹೊರಟು, ಮಾತೃಮಂಡಳಿ ವೃತ್ತದಲ್ಲಿ ಪಂಜಿನ ಮೆರವಣಿಗೆ ಮೂಲಕ ಮಾನವ ಸರಪಳಿ ನಿರ್ಮಿಸಿ ನ್ಯಾ. ಮಲ್ಲಿಕಾರ್ಜುನಗೌಡ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾ. ಮಲ್ಲಿಕಾರ್ಜುನಗೌಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪಂಜಿನ ಮೆರವಣಿಗೆ ರಾಯಚೂರು ಜಿಲ್ಲೆಯಲ್ಲಿ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋಗೆ ಪುಷ್ಪಾರ್ಚನೆ ಮಾಡದೆ ಅಪಮಾನ ಮಾಡಿರುವ ಆರೋಪ ಎದುರಿಸುತ್ತಿರುವ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ನ್ಯಾ. ಮಲ್ಲಿಕಾರ್ಜುನಗೌಡ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಬೇಕು. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದೇ ಇರುವುದು ಬೇಸರ ತಂದಿದೆ. ಇಂತಹ ನ್ಯಾಯಾಧೀಶರಿಂದ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಇವರು ನೀಡಿರುವ ತೀರ್ಪುಗಳನ್ನು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ಓದಿ:ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ