ಕರ್ನಾಟಕ

karnataka

ETV Bharat / state

ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ: ಮೇ 22 ರಿಂದ ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಆರಂಭ... - ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಮೇ 22 ರಿಂದ ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಆರಂಭವಾಗಲಿದೆ.

Mysore
ರೈಲು ಸಂಚಾರ

By

Published : May 21, 2020, 9:10 AM IST

ಮೈಸೂರು: ಲಾಕ್‌ಡೌನ್​ಗೆ ಸಡಿಲಿಕೆ ಸಿಕ್ಕಿದ್ದು, ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಯಾವಾಗ ಶುರುವಾಗಲಿದೆ ಎಂದು ಹಂಬಲಿಸುತ್ತಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ.

ಮೇ 22 ರಿಂದ ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ. ಕೆಎಸ್‌ಆರ್ ಬೆಂಗಳೂರಿನಿಂದ ಬೆಳಗ್ಗೆ 9.20ಕ್ಕೆ ಹೊರಡುವ ರೈಲು, ಮೈಸೂರು ರೈಲ್ವೆ ನಿಲ್ದಾಣಕ್ಕೆ ಮಧ್ಯಾಹ್ನ 12.45 ಕ್ಕೆ ತಲುಪಲಿದೆ.

ಮೈಸೂರು-ಬೆಂಗಳೂರು ನಡುವೆ ರೈಲು ಸಂಚಾರ ಆರಂಭ ಕುರಿತು ಪ್ರಕಟಣೆ

ಮೈಸೂರು ರೈಲು ನಿಲ್ದಾಣದಿಂದ ಮಧ್ಯಾಹ್ನ 1.45 ಕ್ಕೆ ತೆರಳುವ ರೈಲು, ಬೆಂಗಳೂರಿಗೆ ಸಂಜೆ 5 ಗಂಟೆಗೆ ತಲುಪಲಿದೆ. ಇನ್ನು, ಮೈಸೂರಿನಿಂದ ಹೊರಡುವ ರೈಲು ನಾಗನಹಳ್ಳಿ, ಪಾಂಡವಪುರ, ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ ಮಾರ್ಗವಾಗಿ ಬೆಂಗಳೂರು ತಲುಪಲಿದೆ.

ಬೆಂಗಳೂರಿನಿಂದ ಹೊರಡುವ ರೈಲು ಕೆಂಗೇರಿ, ರಾಮನಗರ, ಮದ್ದೂರು, ಮಂಡ್ಯ, ಪಾಂಡವಪುರ, ನಾಗನಹಳ್ಳಿ ಮಾರ್ಗವಾಗಿ ಮೈಸೂರು ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details