ಮೈಸೂರು:ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿರುವುದರಿಂದ ನೈಋತ್ಯ ರೈಲ್ವೆ ಮೈಸೂರು ವಿಭಾಗವು ಹೆಚ್ಚುವರಿ ಕಾಯ್ದಿರಿಸದ MEMU ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ವಿಭಾಗದಲ್ಲಿನ ಹಲವು ರೈಲು ಸೇವೆಗಳನ್ನು ಪುನಾರಂಭಿಸಿದೆ. ಈ ರೈಲುಗಳು ಕೋವಿಡ್‌ನ ಪೂರ್ವ ವೇಳಾಪಟ್ಟಿ ಮತ್ತು ನಿಲುಗಡೆಗಳೊಂದಿಗೆ ಚಲಿಸಲಿವೆ.
ಲಾಕ್‌ಡೌನ್ ಸಡಿಲಿಕೆ ನಡುವೆ ಮೈಸೂರಿನಿಂದ ರೈಲು ಸಂಚಾರ ಪುನಾರಂಭ - Mysuru railway
ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ಮೈಸೂರಿನಿಂದ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೋವಿಡ್-19ಗೆ ಸಂಬಂಧಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ನಿಯಮಗಳನ್ನು ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.

ಲಾಕ್‌ಡೌನ್ ಸಡಿಲಿಕೆ ನಡುವೆ ರೈಲು ಸಂಚಾರ ಪುನರಾರಂಭ
ಕೋವಿಡ್-19ಗೆ ಸಂಬಂಧಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ನಿಯಮಗಳನ್ನು ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.
ಮೈಸೂರು ರೈಲ್ವೆ ನಿಲ್ದಾಣದಿಂದ ಹೊರಡುವ ಹಾಗೂ ಬೇರೆ ಜಿಲ್ಲೆಗಳಿಂದ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬರುವ ರೈಲು ಗಾಡಿಗಳ ವೇಳಾಪಟ್ಟಿ ಇಂತಿದೆ.