ಮೈಸೂರು: ಮಂಗಳಮುಖಿಯೊಬ್ಬರು ಅವಿರೋಧವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇದು ಕರ್ನಾಟಕದ ಇತಿಹಾಸದಲ್ಲೇ ಮೊದಲು ಎನ್ನಲಾಗ್ತಿದೆ.
ಜಿಲ್ಲೆಯ ಕೆಆರ್ ನಗರ ತಾಲೂಕಿನ ಸಾಲಿಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಆಯ್ಕೆ ಆಗಿದ್ದಾರೆ. ಇವರನ್ನು ಆಯ್ಕೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ ಹಿನ್ನೆಲೆ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಬೆಂಬಲದೊಂದಿಗೆ ಇವರನ್ನು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.