ಮೈಸೂರು: ರಾಜ್ಯ ಸರ್ಕಾರ ವಿರುದ್ಧ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಇಂದು ನೌಕರರು ಹಾಗೂ ಮಹಿಳೆಯರು ತಟ್ಟೆ - ಲೋಟ ಬಾರಿಸಿ ಮೈಸೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಮುಂದುವರಿದ ಸಾರಿಗೆ ನೌಕರರ ಪ್ರತಿಭಟನೆ: ತಟ್ಟೆ-ಲೋಟ ಬಡಿದು ಆಕ್ರೋಶ
ವಿವಿಧ ಬೇಡಿಕೆ ಈಡೇರಿಸುವಂತೆ ಕಳೆದ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದೆ. ನೀಡಿದ ಭರವಸೆ ಈಡೇರಿಸದೇ ವಂಚನೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಕಳೆದ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದೆ. ನೀಡಿದ ಭರವಸೆ ಈಡೇರಿಸದೇ ವಂಚನೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆ ನಿರತ ಯಾಸ್ಮಿನ್ ಬಾನು ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ 3 ತಿಂಗಳಿನಿಂದ ನನ್ನ ಪತಿಗೆ ಸಂಬಳವಾಗಿಲ್ಲ. ಸರ್ಕಾರ ಆಶ್ವಾಸನೆ ಕೊಟ್ಟಂತೆ ಬೇಡಿಕೆ ಈಡೇರಿಸಿಲ್ಲ ಎಂದು ದೂರಿದರು. ಮೆಕ್ಯಾನಿಕ್ ಪರಶುರಾಮ್ ಮಾತನಾಡಿ, ರಾಜ್ಯ ಸರ್ಕಾರ 18 ಸಾವಿರ ಸಂಬಳ ನೀಡುತ್ತದೆ. ಹೀಗಾದರೆ ಸಂಸಾರ ಮಾಡುವುದು ಹೇಗೆ? ನಮ್ಮ ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.