ಮೈಸೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉದಯಗಿರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ - Mysure marijuana sale news
ಮೈಸೂರಿನ ರಾಜೀವ್ ನಗರದ 1ನೇ ಹಂತದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
![ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ Udaygiri police station](https://etvbharatimages.akamaized.net/etvbharat/prod-images/768-512-12:54:08:1599895448-kn-mys-4-ganja-accuseds-arrest-news-7208092-12092020124642-1209f-1599895002-173.jpg)
Udaygiri police station
ರಾಜೀವ್ ನಗರದ 1ನೇ ಹಂತದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಬ್ದುಲ್ ರಜೀಕ್ ಮತ್ತು ಅಮ್ಮುಖಾನ್ ಬಂಧಿತ ಆರೋಪಿಗಳು. ಗಸ್ತಿನಲ್ಲಿದ್ದ ಪೊಲೀಸರನ್ನು ನೋಡಿ ಆರೋಪಿಗಳಿಬ್ಬರು ಓಡಲು ಯತ್ನಿಸಿದ್ದಾರೆ. ಅನುಮಾನಗೊಂಡ ಪೊಲೀಸರು ಇವರನ್ನು ಹಿಡಿದು ವಿಚಾರಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ನಂತರ ಬಂಧಿತರ ಬಳಿ ಇದ್ದ 146 ಗ್ರಾಂ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.