ಮೈಸೂರು :ಜಿಲ್ಲೆಯಲ್ಲಿಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಜಿಲ್ಲೆಯೊಂದರಲ್ಲೇ ಸೋಂಕಿತರ ಸಂಖ್ಯೆ 14ಕ್ಕೆ ಏರಿದೆ.
ಮೈಸೂರಿನಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ 14ಕ್ಕೆ ಏರಿದ ಸೋಂಕಿತರ ಸಂಖ್ಯೆ - dc mysore news
ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಮೈಸೂರು ಕೊರೊನಾ
ನಿನ್ನೆ 12 ಇದ್ದ ಕೊರೊನಾ ಪಾಸಿಟಿವ್ ಇಂದು 14ಕ್ಕೆ ಏರಿಕೆಯಾಗಿದೆ. ಸೋಂಕಿತರು ನಂಜನಗೂಡಿನ ತಾಂಡ್ಯ ಪ್ರದೇಶದ ಜುಬಿಲೆಂಟ್ ಕಾರ್ಖಾನೆಯ ನೌಕರರು ಎನ್ನಲಾಗಿದ್ದು, ಸದ್ಯಕ್ಕೆ ಇವರ ಆರೋಗ್ಯ ಸ್ಥಿರವಾಗಿದೆ. ಇವರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.