ಮೈಸೂರು :ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜರ್ ಬಾದ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿದ್ದಾರೆ. ನಜರ್ ಬಾದ್ ಠಾಣೆಯ ಎಎಸ್ಐ ಗೋವಿಂದನಾಯಕ ಹಾಗೂ ಹೆಡ್ ಕಾನ್ಸ್‌ಟೇಬಲ್ ಚನ್ನಬಸಪ್ಪರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಅಕ್ಟೋಬರ್ 17 ರಂದು ಕೆ.ಸಿ.ಬಡಾವಣೆಯ ಆರ್ಚ್ ಬಳಿ ನಡೆದಿದ್ದ ಸಣ್ಣಪುಟ್ಟ ಗಲಾಟೆಗೆ ಸಂಬಂಧಿಸಿದಂತೆ ಕೆಲವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದಾರೆ.