ಮೈಸೂರು:ರಾಜ್ಯದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಹಾಗೂ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ರಾಜ್ಯ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ನಿನ್ನೆ ರಾತ್ರಿಯೇ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಸಚಿವರು, ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯವರು ಕೇಂದ್ರ ಸಚಿವರಿಗೆ ಪೂರ್ಣ ಕುಂಭ ಸ್ವಾಗತ ನೀಡಿದರು. ಮೊದಲು ಗಣಪತಿಗೆ ಪೂಜೆ ಸಲ್ಲಿಸಿದ ಶಾ, ಬಳಿಕ ಚಾಮುಂಡಿ ತಾಯಿಯ ದರ್ಶನ ಪಡೆದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಟಿಕೆಟ್ ವಂಚಿತ ಎಸ್ ಎ ರಾಮದಾಸ್ ಸೇರಿದಂತೆ ಕೆಲ ನಾಯಕರೂ ಜೊತೆಗಿದ್ದರು.