ಮೈಸೂರು:ದೇಶದಲ್ಲಿ ಹಸಿರೀಕರಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಮಾಹಿತಿ ಹಂಚಿಕೊಂಡರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶಾಖಾ ಮಠಕ್ಕೆ ಭೇಟಿ ನೀಡಿದ ಗಡ್ಕರಿ, ಶ್ರೀಗಳಿಂದ ಆಶೀರ್ವಾದ ಪಡೆದು, ಕುಶಲೋಪರಿ ವಿಚಾರಿಸಿದರು.
ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ಗಡ್ಕರಿ - ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು.
ಸುತ್ತೂರು ಶ್ರೀ ಆಶೀರ್ವಾದ ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಡೀಸೆಲ್ ಹಾಗೂ ಪೆಟ್ರೋಲ್ ಬಳಕೆಯನ್ನು ಕಡಿಮೆ ಮಾಡಿ, ಕಬ್ಬು ಹಾಗೂ ಅಕ್ಕಿಯಿಂದ ಉತ್ಪಾದನೆ ಆಗುವ ಎಥೆನಾಲ್ ಬಳಕೆಗೆ ಹೆಚ್ಚು ಒತ್ತು ನೀಡಲಾಗುವುದು. ಇದರ ಬಳಕೆಯಿಂದ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯವಿದೆ. ಹಳ್ಳಿಗಾಡು ಜನರ ಜೀವನದ ಸುಧಾರಣೆ ಮಾಡಲು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಹೆಚ್ಚು ಮಹತ್ವ ನೀಡಲಾಗುತ್ತಿದೆ. ಸ್ವದೇಶಿ ಬಳಕೆಯಲ್ಲಿ ಹೆಚ್ಚು ಸ್ವಾವಲಂಬನೆ ಸಾಧಿಸುವುದೇ ನಮ್ಮ ಮೂಲ ಉದ್ದೇಶ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ:ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದ್ರೂ ಕಾಂಗ್ರೆಸ್ ಗೆಲ್ಲಲ್ಲ: ಹೆಚ್ಡಿಕೆ
Last Updated : Jun 9, 2022, 8:18 PM IST