ಕರ್ನಾಟಕ

karnataka

ETV Bharat / state

ಇದೇ ಅವಕಾಶ ಬಳಸಿಕೊಂಡು ಕಾಂಗ್ರೆಸ್ ಜನರನ್ನು ಪ್ರಚೋದಿಸುತ್ತಿದೆ: ವಿ. ಶ್ರೀನಿವಾಸ್ ಪ್ರಸಾದ್ - ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಹತಾಶೆಯಿಂದ ಜನರನ್ನು ಪ್ರಚೋದಿಸುತ್ತಿದೆ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.

v shrinivasa prasad
ಸಂಸದ ವಿ. ಶ್ರೀನಿವಾಸ್ ಪ್ರಸಾದ್

By

Published : Dec 20, 2019, 4:31 PM IST

ಮೈಸೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಹತಾಶೆಯಿಂದ ಜನರನ್ನು ಪ್ರಚೋದಿಸುತ್ತಿದೆ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಪೌರತ್ವ ಕಾಯ್ದೆಯಿಂದ ಭಾರತೀಯರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಕಾಯ್ದೆ ಬೇರೆಡೆಯಿಂದ ವಲಸೆ ಬಂದವರಿಗೆ ಮಾತ್ರ ಅನ್ವಯಿಸುತ್ತದೆ. ಕಾಂಗ್ರೆಸ್​ನವರು ಪೌರತ್ವವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡು ಈ ರೀತಿಯ ಘಟನೆಗಳಿಗೆ ಕಾರಣರಾಗಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಜನರನ್ನು ಪ್ರಚೋದನೆ ಮಾಡುತ್ತಿದ್ದಾರೆ ಎನಿಸುತ್ತದೆ ಎಂದರು.

ನಾನು ಪೌರತ್ವ ಕಾಯ್ದೆಯ ಬಗ್ಗೆ ಸಂಸತ್​ನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದೇನೆ. ಈ ಕಾಯ್ದೆ ಸಂಪೂರ್ಣವಾಗಿ ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಈ ವಿಚಾರವನ್ನು ದೇಶದ ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು‌. ಅದನ್ನು ಬಿಟ್ಟು ಹಿಂಸಾತ್ಮಕ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಸಂಸದ ವಿ. ಶ್ರೀನಿವಾಸ್ ಪ್ರಸಾದ್

ಪಾಕಿಸ್ತಾನ ನಂಬರ್ 1 ಟೆರೆರಿಸ್ಟ್ ದೇಶ ಎಂದು ಜಗತ್ತಿಗೆ ಗೊತ್ತಿದೆ. ಆ ದೇಶದಿಂದ ನುಸುಳುವ ಉಗ್ರವಾದಿಗಳು ನಮ್ಮ ದೇಶದ ಕಾಶ್ಮೀರ ಹಾಗೂ ಬಾಂಬೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿದ್ದಾರೆ. ಇದನ್ನು ಸರಿಯಾಗಿ ಭಾರತೀಯರು ಗಮನಿಸಿಬೇಕು ಎಂದರು.

ABOUT THE AUTHOR

...view details