ಮೈಸೂರು :ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಮೈಸೂರು-ಬೆಂಗಳೂರು ರಸ್ತೆಯ ಸಿದ್ದಲಿಂಗಪುರ ಬಳಿ ರಸ್ತೆ ತಡೆ ನಡೆಸಲು ಮುಂದಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದಕ್ಕೂ ಮೊದಲು ಮಾತನಾಡಿದ ವಾಟಾಳ್ ನಾಗರಾಜ್, ಡಿ.5ರಂದು ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ನಿಲ್ಲಿಸಬೇಕಾದರೆ ಮರಾಠಾ ಪ್ರಾಧಿಕಾರ ವಾಪಸ್ ಪಡೆಯಬೇಕು. ನ.30ರವರೆಗೆ ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿದ್ದೇವೆ. ಪ್ರಾಧಿಕಾರ ವಾಪಸ್ ಪಡೆಯದೇ ಇದ್ದರೆ, ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.