ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭ್ರಷ್ಟರನ್ನು ಜೈಲಿಗೆ ಕಳುಹಿಸುವುದಿಲ್ಲ. ಆದ್ರೆ, ನಾನು ಆರು ತಿಂಗಳು ಕಾಲ ಈ ರಾಜ್ಯದ ಮುಖ್ಯಮಂತ್ರಿಯಾದರೆ ರಾಜ್ಯವನ್ನು ಬದಲಾವಣೆ ಮಾಡುತ್ತೇನೆ. ಭ್ರಷ್ಟರನ್ನು ಜೈಲಿಗೆ ಕಳುಹಿಸದೇ ಬಿಡುವುದಿಲ್ಲವೆಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯವನ್ನೇ ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ.
ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿದರು ಯಡಿಯೂರಪ್ಪ ಅವರ ಸರ್ಕಾರ ಭ್ರಷ್ಟರಿಂದ ರಚನೆಯಾಗಿದೆ. ಅವರು ಭ್ರಷ್ಟರಿಗೆ ಸಹಾಯ ಮಾಡುತ್ತಾರೆ ಎಂದು ವಾಟಾಳ್ ಆರೋಪಿಸಿದರು. ಅಲ್ಲದೆ, ತಾನು ಮುಖ್ಯಮಂತ್ರಿಯಾದರೆ ಗಣಿ ಲೂಟಿ ಮಾಡಿದರವರನ್ನು, ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ತಿಳಿಸಿದರು. ರೋಹಿಣಿ ಸಿಂಧೂರಿ ಓರ್ವ ದಕ್ಷ ಅಧಿಕಾರಿ. ಆದ್ರೆ ಅವರನ್ನೇ ವರ್ಗಾವಣೆ ಮಾಡಿಬಿಟ್ರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ಕಳೆದ 5 ತಿಂಗಳಲ್ಲಿ 58.92 ಕೋಟಿ ರೂ. ದಂಡ ವಸೂಲಿ ಮಾಡಿದ ಬೆಂಗಳೂರು ಸಂಚಾರಿ ಪೊಲೀಸರು
ಮೈಸೂರಿನಲ್ಲಿ ನಡೆದಿರುವ ಭೂ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ಕೊಡಬೇಕು. ರೋಹಿಣಿ ಸಿಂಧೂರಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಬೇಕು ಎಂದು ವಾಟಾಳ್ ಒತ್ತಾಯಿಸಿದರು.