ಮೈಸೂರು:ಅಯ್ಯೋ, ನನಗೆ ಬಿಟ್ ಕಾಯಿನ್ (Bitcoin) ಅಂದ್ರೆನೇ ಗೊತ್ತಿಲ್ಲ, ಅದೇನಿದ್ರೂ ದರೋಡೆಕೋರರಿಗೆ ಮಾತ್ರ ಗೊತ್ತು ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ಹಾರ್ಡಿಂಗ್ ವೃತ್ತದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಬಿಟ್ ಕಾಯಿನ್ ಪ್ರಕರಣವನ್ನ ಸಿಬಿಐಗೆ (CBI) ವಹಿಸಬೇಕು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು.ಯಾರೇ ಶಾಮೀಲಾಗಿದ್ರೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಧಾನಪರಿಷತ್ ಚುನಾವಣೆ (State Legislative Council Election) ಟಿಕೆಟ್ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ನವರು ನನಗೆ ಒಂದು ಸ್ಥಾನ ಬಿಟ್ಟುಕೊಡಬೇಕು. ಹಿಂದಿನಿಂದಲೂ ನಾನು ಕಾಂಗ್ರೆಸ್ಗೆ ಬೆಂಬಲಿಸಿದ್ದನೆ. ಎಸ್.ಎಂ.ಕೃಷ್ಣ, ರಾಜಶೇಖರಮೂರ್ತಿ, ಧೃವನಾರಾಯಣ್ ಅವರಿಗೆ ಮತ ಹಾಕಿದ್ದೀನಿ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನನ್ನನ್ನು ಪರಿಷತ್ಗೆ ನಾಮನಿರ್ದೇಶನ ಮಾಡಲು ಮೈಸೂರು ಭಾಗದ ಜನರು ಒತ್ತಾಯ ಮಾಡಿದರು ಎಂದು ಹೇಳಿದರು.