ಮೈಸೂರು: ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡಬೇಡಿ, ಮಾಡಿದರೆ ಲಿಂಗಾಯತ ಸಮುದಾಯದವರಿಗೇ ಸಿಎಂ ಸ್ಥಾನ ನೀಡಿ ಎಂದು ಮೈಸೂರು ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳ ಪರವಾಗಿ ಲೋಕೇಶ್ ಮಾತನಾಡಿ, ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ನಿಲುವಿಗೆ ವಿರೋಧ ವ್ಯಕ್ತಪಡಿಸಿದರು.
ಮೈಸೂರು ಪತ್ರಿಕಾ ಭವನದಲ್ಲಿ ಜಿಲ್ಲಾ ವೀರಶೈವ-ಲಿಂಗಾಯತ ಮಹಾ ಸಭಾದ ಸದಸ್ಯ ಲೋಕೇಶ್ ಮಾತನಾಡಿದರು. ಇದನ್ನೂ ಓದಿ: ಕ್ಷೇತ್ರದಲ್ಲಿದ್ದು ನೆರೆ ಪರಿಹಾರ ಕಾರ್ಯ ಮಾಡಲೇಬೇಕು: MLAs, Ministersಗಳಿಗೆ ಸಿಎಂ ಖಡಕ್ ಸೂಚನೆ
ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ ಅವರಿಂದ ಇಡೀ ಸಮುದಾಯವೇ ಅವರ ಪರವಾಗಿ ಬೆಂಬಲ ನೀಡಿ 58 ಶಾಸಕರ ಆಯ್ಕೆಗೆ ಕಾರಣವಾಯಿತು. ಈಗ ಅವರನ್ನು ವಯಸ್ಸಿನ ಕಾರಣ ನೀಡಿ ಕೆಳಗಿಸುವುದು ಸರಿಯಲ್ಲ. ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಂದು ವೇಳೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ವೀರಶೈವ ಲಿಂಗಾಯತರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಇದೇ ಮುಳುವಾಗಲಿದೆ ಎಂದು ಎಚ್ಚರಿಸಿದರು.