ಕರ್ನಾಟಕ

karnataka

ETV Bharat / state

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಗೂ ಭಾರತೀಯ ಭಾಷಾ ಸಂಸ್ಥಾನದಲ್ಲಿ ಜು.13ರಂದು ಜರುಗಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮೈಸೂರಿಗೆ ಆಗಮಿಸಿದರು

By

Published : Jul 12, 2019, 11:48 PM IST

ಮೈಸೂರು: ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಗೂ ಭಾರತೀಯ ಭಾಷಾ ಸಂಸ್ಥಾನದಲ್ಲಿ ಜು.13ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶುಕ್ರವಾರ ಸಂಜೆ ಮೈಸೂರಿಗೆ ಆಗಮಿಸಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮೈಸೂರಿಗೆ ಆಗಮಿಸಿದರು

ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಮೇಯರ್ ಪುಷ್ಪಲತಾ ಜಗನ್ನಾಥ್ ಹೂಗುಚ್ಚ ನೀಡಿ ಸ್ವಾಗತಿಸಿದರು.

ಜು13ರ ಬೆಳಿಗ್ಗೆ 9ಕ್ಕೆ ಪ್ರಾದೇಶಿಕ ಶಿಕ್ಷಣ ಸಂಸ್ಥೆ(ಆರ್‌ಐಇಎಂ) ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಡಾ.ಎಸ್.ರಾಧಕೃಷ್ಣನ್ ಸಭಾಂಗಣದಲ್ಲಿ ಉದ್ಘಾಟಿಸಲಿದ್ಧಾರೆ. ರಾಜ್ಯಪಾಲ ವಜೂಬಾಯಿ ರೂಡಾಬಾಯಿ ವಾಲ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎನ್‌ಸಿಇಆರ್‌ಟಿ ನಿರ್ದೇಶಕ ಪ್ರೊ.ಎಚ್.ಕೆ.ಸೇನಾಪತಿ, ಆರ್‌ಐಇಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ಶ್ರೀಕಾಂತ್ ಉಪಸ್ಥಿತರಿರುವರು. ನಂತರ ಬೆಳಿಗ್ಗೆ 10.15ಕ್ಕೆ ಭಾರತೀಯ ಭಾಷಾ ಸಂಸ್ಥಾನದದ ಸ್ವರ್ಣ ಜಯಂತಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಮುಗಿದ ಬಳಿಕ ದೆಹಲಿಗೆ ತೆರಳಲಿದ್ದಾರೆ.

For All Latest Updates

ABOUT THE AUTHOR

...view details