ಕರ್ನಾಟಕ

karnataka

ETV Bharat / state

ಡಾ. ವಿಷ್ಣುವರ್ಧನ್ ಇಡೀ ಕರುನಾಡು ‌ಮೆಚ್ಚಿದ ಹೃದಯವಂತ: ಸಿಎಂ ಬಸವರಾಜ ಬೊಮ್ಮಾಯಿ - ಅನಿರುದ್ಧ್ ಜತ್ಕರ್

ವಿಷ್ಣುವರ್ಧನ್ ಅಭಿಮಾನಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ - ವಿಷ್ಣುವರ್ಧನ್ ಭಾವುಕ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು - ಸ್ಮಾರಕ ನಿರ್ಮಾಣಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 11 ಕೋಟಿ ಬಿಡುಗಡೆ.

vishnuvardhan-memorial-dedication-programme
ಡಾ. ವಿಷ್ಣುವರ್ಧನ್ ಇಡೀ ಕರುನಾಡು ‌ಮೆಚ್ಚಿದ ಹೃದಯವಂತ: ಸಿಎಂ ಬಸವರಾಜ ಬೊಮ್ಮಾಯಿ

By

Published : Jan 29, 2023, 5:44 PM IST

ಮೈಸೂರು:ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರು ಇಡೀ ಕರುನಾಡು ‌ಮೆಚ್ಚಿದ ಹೃದಯವಂತ, ತಮ್ಮ ಅಭಿನಯದಿಂದಲೇ ಜನಮನ ಗೆದ್ದ ಅಪ್ರತಿಮ ನಟ ಎಂದು ಸಿಎಂ ಬೊಮ್ಮಾಯಿ ಅವರು ವಿಷ್ಣುವರ್ಧನ್​ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿದರು.

ನಗರದ ಎಚ್​ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಿರ್ಮಿಸಿರುವ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ಉದ್ಘಾಟಿಸಿ ಮಾತನಾಡಿದರು ಅವರು, ನಾಗರಹಾವು ಸಿನಿಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾದ ಡಾ.ವಿಷ್ಣುವರ್ಧನ್ ಅವರು ಯಾವುದೇ ಪಾತ್ರಕ್ಕೂ ಸೈ ಎನ್ನುವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಡಾ.ವಿಷ್ಣುವರ್ಧನ್ ಅವರಿಗೆ ಜೀವನದಲ್ಲಿ ಜೊತೆಯಾಗಿ, ಶಕ್ತಿಯಾಗಿ ನಿಂತಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಭಾರತಿ ವಿಷ್ಣುವರ್ಧನ್​ ಅವರು ವಿಷ್ಣುವರ್ಧನ್ ಅವರು ಜನಿಸಿದ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣ ಮಾಡಬೇಕೆಂದು ಹಂಬಲಿಸಿ, ಮುಂದೆ ನಿಂತು, ಪರಿಶ್ರಮ ವಹಿಸಿ ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣ ಮಾಡಿಸಿದ್ದಾರೆ. ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ. ಸಾರ್ವಜನಿಕರು ಹಾಗೂ ಚಿತ್ರರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಾ. ವಿಷ್ಣುವರ್ಧನ್ ಇಡೀ ಕರುನಾಡು ‌ಮೆಚ್ಚಿದ ಹೃದಯವಂತ: ಸಿಎಂ ಬಸವರಾಜ ಬೊಮ್ಮಾಯಿ

ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರೋ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70ರ ದಶಕದಲ್ಲಿ ನಾಗರಹಾವು ಚಿತ್ರ ಬಂದಿತ್ತು, ಮೊದಲ ಸಲ ಆ ಚಿತ್ರವನ್ನು ನೋಡಿದವರು ಖಂಡಿತವಾಗಿ ವಿಷ್ಣುವರ್ಧನ್ ಅಭಿಮಾನಿ ಆಗುತ್ತಿದ್ದರು. ಇಂದಿಗೂ ಕೂಡ ವಿಷ್ಣುವರ್ಧನ್ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ವಿಷ್ಣುವರ್ಧನ್ ಭಾವುಕ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು. ಸ್ಮಾರಕ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 11 ಕೋಟಿ ಬಿಡುಗಡೆ ಮಾಡಿಸಿದ್ದರು. ಇದಕ್ಕಾಗಿ ನಾನು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ:ನಾಲ್ವರು ಶಿಲ್ಪಿಗಳು, 10 ದಿನ : ಕೃಷ್ಣಶಿಲೆಯಲ್ಲಿ ಮೈದಳೆದ ವಿಷ್ಣುವರ್ಧನ್ ಪ್ರತಿಮೆ

ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ. ರಾಜ್ಯ ಸರ್ಕಾರ ಮುಂದಿನ‌ ದಿನಗಳಲ್ಲಿ ಅವರ ಭಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಜತ್ಕರ್​, ವಿಷ್ಣುವರ್ಧನ್ ಕುಟುಂಬಸ್ಥರು ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ.ಪಿ ಹರ್ಷ ಅವರು ಪ್ರಸ್ತಾವಿಕ ನುಡಿಗಳನ್ನು ಮಾತನಾಡಿ, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಹಿನ್ನಲೆ, ಸ್ವರೂಪ ಇರುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ , ಶಾಸಕರಾದ ರಾಮದಾಸ್, ನಾಗೇಂದ್ರ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ವಿವಿಧ ಜನ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಇಂದು ಡಾ.ವಿಷ್ಣುವರ್ಧನ್​ ಸ್ಮಾರಕ ಉದ್ಘಾಟನೆ

ABOUT THE AUTHOR

...view details