ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವುದರಿಂದ ಜಲಾಶಯಕ್ಕೆ ಹೆಚ್ಚು ನೀರು ಬರುತ್ತಿದೆ. ಇದರಿಂದಾಗಿ ಜಲಾಶಯದ 4 ಕ್ರಸ್ಟ್ ಗೇಟ್ ಮೂಲಕ 35 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಕಬಿನಿ ಡ್ಯಾಂನಿಂದ 35 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಪ್ರವಾಹ ಭೀತಿಯಲ್ಲಿ ನದಿ ಪಾತ್ರದ ಜನತೆ
ಕೇರಳದ ವೈಯನಾಡು ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದೆ. ಇದರಿಂದಾಗಿ ಜಲಾಶಯದ 4 ಕ್ರಸ್ಟ್ ಗೇಟ್ಗಳ ಮೂಲಕ 35 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಕೇರಳದ ವೈಯನಾಡು ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದೆ. ಇದರಿಂದಾಗಿ ಜಲಾಶಯದ 4 ಕ್ರಸ್ಟ್ ಗೇಟ್ಗಳ ಮೂಲಕ 35 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಬಿನಿ ಜಲಾಶಯ ಹಾಗೂ ನದಿ ಪಾತ್ರದಲ್ಲಿರುವ ಜನರು ತಮ್ಮ ಆಸ್ತಿ-ಪಾಸ್ತಿ ಮತ್ತು ಜಾನುವಾರುಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತದಿಂದ ತಿಳಿಸಲಾಗಿದೆ.
ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ ಬಿಟ್ಟಿರುವುದರಿಂದ ಜಲಾಶಯದ ಮುಂಭಾಗದಲ್ಲಿರುವ ಸೇತುವೆ ಮೇಲೆ ನೀರು ಬಂದಿದ್ದು , ಇದರಿಂದ ಹ್ಯಾಂಡ್ ಪೋಸ್ಟ್ ಹಾಗೂ ಎನ್. ಬೇಗೂರು ಮುಖ್ಯ ರಸ್ತೆ ಬಂದ್ ಆಗಿದೆ. ಇದರಿಂದ ಬಿದರಹಳ್ಳಿ, ತೆರಣಿಮುಂಟಿ, ಬಸಾಪುರ, ಕಳಸೂರು, ಕೆಂಚನ ಹಳ್ಳಿ, ಎನ್.ಬೇಗೂರು ಬೀರಂಬಳ್ಳಿ ಸೇರಿದಂತೆ ಹಲವು ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದೆ.