ಮೈಸೂರು :ವಯನಾಡು ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ತುಂಬುವ ಹಂತಕ್ಕೆ ಬಂದಿದ್ದು, ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ಕಬಿನಿಯಲ್ಲಿ ಹೆಚ್ಚಿದ ನೀರಿನ ಮಟ್ಟ.. ಜಲಾಶಯ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ಕೊಟ್ಟ ಅಧಿಕಾರಿಗಳು
ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಬಿನಿ ಜಲಾಶಯ ತುಂಬುವ ಹಂತದಲ್ಲಿದ್ದು, 80 ಸಾವಿರ ಕ್ಯೂಸೆಕ್ ನೀರನ್ನು ಜಲಯಾಶಯದಿಂದ ಹರಿ ಬಿಡಲಾಗುತ್ತಿದ್ದು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಮತ್ತು ವರುಣಾ ನಾಲಾ ವೃತ್ತ ಅಧೀಕ್ಷಕರ ಸೂಚನೆ ನೀಡಿದ್ದಾರೆ.
ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯ 2,284 ಗರಿಷ್ಠ ಮಟ್ಟ ಹೊಂದಿದ್ದು, ಸದ್ಯ 2281.53 ಅಡಿ ನೀರಿದೆ. ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ.
ನಂಜನಗೂಡು - ಊಟಿ ಸಂಪರ್ಕ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅದಕ್ಕೆ ಬದಲಿ ಮಾರ್ಗಕ್ಕಾಗಿ ಜಿಲ್ಲಾಡಳಿತ ಸಜ್ಜಾಗುತ್ತಿದೆ. ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಕಬಿನಿ ಮತ್ತು ವರುಣಾ ನಾಲಾ ವೃತ್ತ ಅಧೀಕ್ಷಕರು ಮುನ್ನೆಚ್ಚರಿಕೆ ನೀಡಿದ್ದಾರೆ.