ಮೈಸೂರು: ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆನಂದ್ ಸಿಂಗ್ ಮನವೊಲಿಸುವ ಕೆಲಸ ಮಾಡ್ತೇವೆ :ಮಾಜಿ ಸಿಎಂ ಸಿದ್ದರಾಮಯ್ಯ - kannadanews
ಆನಂದ್ ಸಿಂಗ್ ಜಿಂದಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕವಾಗಿ ರಾಜೀನಾಮೆ ನೀಡಿದ್ದು, ಅವರ ಮನವೊಲಿಸುವ ಕೆಲಸ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಳ್ಳಾರಿಯ ಆನಂದ್ ಸಿಂಗ್ ಸಚಿವ ಸ್ಥಾನದ ಆಕಾಂಕ್ಷಿಯಾಗಿ ರಾಜೀನಾಮೆ ನೀಡಿಲ್ಲ ಜಿಂದಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಮನವೊಲಿಸುವ ಕೆಲಸ ಮಾಡಲಾಗುವುದು . ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ ಅವರ ಸಂಪರ್ಕದಲ್ಲಿ ಪಕ್ಷದ ಇತರ ನಾಯಕರಿದ್ದಾರೆ .ಆನಂದ್ ಸಿಂಗ್ ಅವರೊಂದಿಗೆ ಈಗಾಗಲೇ ನಾನು ಫೋನ್ ಮುಖಾಂತರ ಮಾತುಕತೆ ನಡೆಸಿದ್ದೇನೆ. ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ ಎಂಬುದು ಊಹಾಪೋಹದ ಸುದ್ದಿ ಎಂದರು.
ಈಗಾಗಲೇ ಈ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯ ರಾಷ್ಟ್ರೀಯ ನಾಯಕರು ಮುಂದಾಗಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರ ಆದೇಶದ ಮೇರೆಗೆ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಸರಕಾರ ಸುಭದ್ರವಾಗಿದ್ದು ಯಾವುದೇ ಕಾರಣಕ್ಕೂ ಸರಕಾರವನ್ನು ಅಸ್ಥಿರ ಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.