ಮೈಸೂರು: ಹಳೆ ನೋಟುಗಳ ವಿನಿಮಯ ಮಾಡಲು ಬಂದ ವ್ಯಕ್ತಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಫೈರಿಂಗ್ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ತಿಳಿಸಿದ್ದಾರೆ.
ಮೈಸೂರಲ್ಲಿ ನಡೆದ ಪೊಲೀಸ್ ಫೈರಿಂಗ್ ಬಗ್ಗೆ ಕಮಿಷನರ್ ಹೇಳಿದ್ದೇನು? - undefined
ವಿಜಯನಗರದ ರಿಂಗ್ ರಸ್ತೆಯ ಬಳಿ ಹಳೆ ನೋಟುಗಳನ್ನು ವಿನಿಮಯ ಮಾಡಲು ಬಂದಂತಹ ವ್ಯಕ್ತಿಗಳನ್ನು ಪೊಲೀಸರು ಬಂಧಿಸಲು ಮುಂದಾದಾಗ ಅವರು ಹಲ್ಲೆಗೆ ಮುಂದಾಗಿದ್ದಾರೆ. ಆಗ ಪೊಲೀಸರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಶೂಟೌಟ್ ಬಗ್ಗೆ ಆಸ್ಪತ್ರೆಯಲ್ಲಿ ಮಾಹಿತಿ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ, ಇಂದು ಬೆಳಗ್ಗೆ ವಿಜಯನಗರದ ರಿಂಗ್ ರಸ್ತೆಯ ಬಳಿ ಹಳೆ ನೋಟುಗಳ ವಿನಿಮಯ ಮಾಡಲು ಗುಂಪೊಂದು ಬಂದಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ವಿಜಯನಗರ ಪೊಲೀಸರು ಅವರನ್ನು ಬಂಧಿಸಲು ಹೋಗಿದ್ದಾರೆ.
ಈ ವೇಳೆ ಆ ವ್ಯಕ್ತಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.