ಮೈಸೂರು: ಗಂಡನಿಂದಲೇ ಹೆಂಡತಿ ಕೊಲೆ ಯತ್ನ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹೆಂಡತಿ ಮಣಿ ಸಾವನ್ನಪ್ಪಿದ್ದಾರೆ.
ಗಂಡನಿಂದ ಕೊಲೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸಾವು
ಗಂಡನಿಂದಲೇ ಹೆಂಡತಿ ಕೊಲೆ ಯತ್ನ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹೆಂಡತಿ ಮಣಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಣಿ ಕುಟುಂಬದವರು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಿ.ನರಸೀಪುರ ತಾಲೂಕಿನಲ್ಲಿ ಸಹಾಯಕ ಶಿಶು ಯೋಜಾನ ಅಧಿಕಾರಿ ವೆಂಕಟಪ್ಪ ತನ್ನ ಪತ್ನಿ ನಾಗವೇಣಿ(41) ಅಲಿಯಾಸ್ ಮಣಿ ಎಂಬುವವರನ್ನು ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದರು ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಆಕೆ 4 ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
1997ರಲ್ಲಿ ಇವರು ಮದುವೆ ಆಗಿದ್ದರು. ಆದರೆ ಇತ್ತೀಚೆಗೆ ಹೆಂಡತಿಯೊಂದಿಗೆ ಗಂಡ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಮಾರ್ಚ್ 3ರಂದು ವೆಂಕಟಪ್ಪ ಈಕೆಯ ಮೇಲೆ ಹಲ್ಲೆ ನಡೆಸಿ, ಬಳಿಕ ನೇಣು ಹಾಕಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಣಿ ಕುಟುಂಬದವರು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.