ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಯು ಎ ಇ ಕನ್ನಡ ಸಮುದಾಯ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದು, ಅದನ್ನು ವಿನಮ್ರವಾಗಿ ಒಡೆಯರು ತಿರಸ್ಕರಿಸಿದ್ದಾರೆ.
"ನನಗೆ ಅಂತರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ" ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ಹಾಗೆ ಈ ಗೌರವವನ್ನು ಸ್ವೀಕರಿಸಲು ನಾನು ಯೋಗ್ಯ ಎಂದು ಪರಿಗಣಿಸಿದ್ದಕ್ಕಾಗಿ ನಾನು ಸಂಘಟಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ಆದರೆ ಈ ಸಮಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ನನಗೆ ಸೂಕ್ತವೆಂದೆನಿಸುತ್ತಿಲ್ಲ ಎಂದು ಹೇಳಿದ್ದಾರೆ.