ಮೈಸೂರು :ನಾಲ್ಕೈದು ದಿನಗಳ ಹಿಂದೆ ತಾನು ಹೆತ್ತ ಗಂಡು ಮಗುವನ್ನೇ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದ ಮಾನಸಿಕ ಅಸ್ವಸ್ಥ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಈಕೆಯ ಮೃತದೇಹ ಹೆಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಕೆರೆಯಲ್ಲಿ ಪತ್ತೆಯಾಗಿದೆ. ಯಡತೊರೆ ಗ್ರಾಮದ ನಿವಾಸಿ ಮಾನಸಿಕ ಅಸ್ವಸ್ಥೆ ಭವಾನಿ ಎಂಬುವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಈಕೆ ನಾಲ್ಕೈದು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ಹೆತ್ತ 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನ ಮನಬಂದಂತೆ ಮಚ್ಚಿನಿಂದ ಕೊಚ್ಚಿ ಸಾಯಿಸಿ ಪರಾರಿಯಾಗಿದ್ದಳು.