ಮೈಸೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ತಿ.ನರಸೀಪುರ ತಾಲೂಕು ಯಾಕನೂರು ಗ್ರಾಮದ ಕಾವ್ಯ (21) ಮೃತ ದುರ್ದೈವಿ.
ಕಾವ್ಯಾಗೆ ಒಂದೂವರೆ ವರ್ಷದ ಹಿಂದೆ ಯಾಕನೂರು ಗ್ರಾಮದ ಸುರೇಶ್ ಎಂಬಾತನೊಂದಿಗೆ ವಿವಾಹವಾಗಿತ್ತು. 'ನನ್ನನ್ನು ಮಗನಿಂದ ದೂರ ಮಾಡಿದ್ದೀಯ ಎಂದು ಅತ್ತೆ ಪುಟ್ಟಮಾದಮ್ಮ ಕಿರುಕುಳ ಕೊಡುತ್ತಿದ್ದರು, ಅಲ್ಲದೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು' ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಅತ್ತೆಯ ಕಿರುಕುಳಕ್ಕೆ ಬೇಸತ್ತ ಕಾವ್ಯ 3 ದಿನಗಳ ಹಿಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆಕೆಯನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.