ಮೈಸೂರು: ಶಕ್ತಿಧಾಮದ ಮಕ್ಕಳನ್ನು ಅನಾಥರೆಂದು ಕರೆಯಬಾರದು. ಇವರು ದೇವರ ಮಕ್ಕಳು. ಹೆಣ್ಣು ಮಕ್ಕಳ ಅಭಿವೃದ್ಧಿಗೆ ಬಜೆಟ್ನಲ್ಲಿ ಸಾಕಷ್ಟು ಹಣ ಮೀಸಲಿಟ್ಟಿದ್ದೇನೆ. ಹಾಗೆಯೇ ಶಕ್ತಿಧಾಮಕ್ಕೂ ಸರ್ಕಾರ 5 ಕೋಟಿ ರೂಪಾಯಿ ನೀಡಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಮೈಸೂರಿನ ಶಕ್ತಿಧಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಇನ್ಫೋಸಿಸ್ ಫೌಂಡೇಶನ್ ಕಟ್ಟಡದ ಲೋಕಾರ್ಪಣೆ ಹಾಗೂ ಶಕ್ತಧಾಮದ ವಿದ್ಯಾಶಾಲಾ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜನ್ಮ ಪೂರ್ವದ ಸಂಬಂಧ ಇರುವುದು ತಾಯಿ ಜೊತೆ ಇದೆ. ಈ ಸಂಬಂಧ ಎಲ್ಲವನ್ನೂ ಕೊಟ್ಟು ಬೆಳೆಸುತ್ತದೆ. ದುರ್ದೈವ ಮತ್ತು ನೋವಿನ ಸಂಗತಿ ಅಂದರೆ ಹೆಣ್ಣಿನ ಶೋಷಣೆ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಯೋಗ ಕೂಡಿ ಬಂದು ಶಕ್ತಿಧಾಮ ಬೆಳೆಯುತ್ತಿದೆ. ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಶಕ್ತಿಧಾಮ ಮಾಡುತ್ತಿದೆ ಎಂದು ಬೊಮ್ಮಾಯಿ ಹೇಳಿದರು.