ಮೈಸೂರು : ಸಚಿವ ಸುಧಾಕರ್ ಅವರ ಏಕಪತ್ನಿವ್ರತಸ್ಥ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಮೈಸೂರಿನಲ್ಲಿ ಮಹಿಳಾ ಕಾಂಗ್ರೆಸ್ ಘಟಕ ಇಂದು ಪ್ರತಿಭಟನೆ ನಡೆಸಿದೆ.
ಏಕಪತ್ನಿವ್ರತಸ್ಥ ಹೇಳಿಕೆ.. ಸಚಿವ ಸುಧಾಕರ್ ರಾಜೀನಾಮೆಗೆ ಮಹಿಳಾ ಕಾಂಗ್ರೆಸ್ ಆಗ್ರಹ
ಬಿಜೆಪಿ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿದೆ. ಮಹಿಳೆಯರನ್ನು ಈ ಸರ್ಕಾರ ಕೇವಲವಾಗಿ ನೋಡುತ್ತಿದೆ..
ಮಹಿಳಾ ಕಾಂಗ್ರೆಸ್
ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಸುಧಾಕರ್ ಈ ರೀತಿಯ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಬಿಜೆಪಿ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿದೆ. ಮಹಿಳೆಯರನ್ನು ಈ ಸರ್ಕಾರ ಕೇವಲವಾಗಿ ನೋಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.