ಮೈಸೂರು: ಆಷಾಢ ತಿಂಗಳ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇವತ್ತು ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಸರಳ ರೀತಿಯಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ದೇವಸ್ಥಾನದ ಆವರಣದೊಳಗೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಪ್ರತಿ ವರ್ಷ ಈ ದಿನ ಬೆಳಗ್ಗೆ 5.30 ರಿಂದ ರಾತ್ರಿ 10 ರವರೆಗೆ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುತ್ತಿತ್ತು. ಆದರೆ, ಈ ಬಾರಿ ಕೊರೊನಾ ಹಾವಳಿಯಿಂದಾಗಿ ಬೆಳಗ್ಗೆ ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ದೇಗುಲಕ್ಕೆ ಬೀಗ ಹಾಕಲಾಗಿದೆ.