ಮೈಸೂರು:ತಾರಕ ಜಲಾಶಯದ ನಾಲೆಗಳ ದುರಸ್ತಿ ಕಾಮಗಾರಿ ಕಳಪೆಯಿಂದ ಕೂಡಿದ್ದು, ಇದಕ್ಕೆ ಗುತ್ತಿಗೆದಾರರ ಜೊತೆ ಅಧಿಕಾರಿಗಳು ಶಾಮಿಲಾಗಿರುವುದೇ ಕಾರಣ ಎಂದು ರೈತರ ಆರೋಪಿಸಿದ್ದಾರೆ.
ಕಳಪೆ ಗುಣಮಟ್ಟದ ತಾರಕ ಜಲಾಶಯದ ನಾಲೆಗಳ ದುರಸ್ತಿ: ರೈತರ ಆಕ್ರೋಶ - Mysore Taraka Dam
ತಾರಕ ಜಲಾಶಯದ ನಾಲೆಗಳ ದುರಸ್ತಿ ಕಾಮಗಾರಿ ಕಳಪೆಯಿಂದ ಕೂಡಿದೆ. ಕಾಮಗಾರಿ ಮಾಡಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ತಾರಕ ಜಲಾಶಯದ ಅಭಿವೃದ್ಧಿ ಕಾಮಗಾರಿಗೆಂದು ಸಿದ್ದರಾಮಯ್ಯ ಸರ್ಕಾರದ ಸಂದರ್ಭದಲ್ಲಿ 30 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಈ ಹಣದಲ್ಲಿ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳ ಕಾಮಗಾರಿ ಹಾಗೂ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಆದರೆ ಕಾಮಗಾರಿಯನ್ನು ತೆಗೆದುಕೊಂಡ ಗುತ್ತಿಗೆದಾರ ಕಮಿಶನ್ ಪಡೆದು ಮತ್ತೊಬ್ಬ ಗುತ್ತಿಗೆದಾರನಿಗೆ ನೀಡಿದ್ದಾನೆ. ಆದರೆ ಕಾಮಗಾರಿ ಎರಡೇ ತಿಂಗಳಿಗೆ ಹಾಳಾಗಿದೆ.
ತಾರಕ ಜಲಾಶಯದಿಂದ ನೀರನ್ನು ಹರಿಸಿದರೆ ಆ ನೀರು ನಾಲೆಗಳಲ್ಲಿ ಸರಿಯಾಗಿ ಹರಿಯುವುದಿಲ್ಲ. ಅಷ್ಟೇ ಅಲ್ಲದೆ, ಜಮೀನುಗಳಿಗೂ ಹೋಗುವುದಿಲ್ಲ ಎಂದು ರೈತ ಶಿವು ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.