ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ ಕಾರಂತರನ್ನು ಸರಿಗಟ್ಟುವ ಮತ್ತೊಬ್ಬ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೂ ಜ್ಞಾನಪೀಠ ಪ್ರಶಸ್ತಿ ಸಿಗಲಿ ಎಂದು ಮುಜರಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು.
ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್, ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಖಾಸಗಿ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಡೋಜ ಡಾ.ಎಸ್.ಎಲ್. ಭೈರಪ್ಪ ಅವರಿಗೆ 'ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ' ಪ್ರದಾನ ಮಾಡಲಾಯಿತು.