ಮೈಸೂರು:ಪಾರಂಪರಿಕ ಕಟ್ಟಡಗಳನ್ನು ಕೆಡವುದಕ್ಕಿಂತ ಅವುಗಳನ್ನು ಉಳಿಸುವುದು ಒಳ್ಳೆಯದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಇಂದು ಗೆಡ್ಡೆ-ಗೆಣಸು ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡ ಇಲ್ಲಿನ ಸಂಸ್ಕೃತಿ ಪ್ರಪಂಚದಲ್ಲಿ ಎಲ್ಲೂ ಇಲ್ಲ. ನಮ್ಮ ಈ ಪಾರಂಪರಿಕ ಕಟ್ಟಡಗಳು ಉಳಿಯಬೇಕು ಎಂಬುದು ನನ್ನ ಅಭಿಪ್ರಾಯ. ಇದನ್ನು ಜಿಲ್ಲಾಧಿಕಾರಿಗಳು ಉಳಿಸುವ ಪ್ರಯತ್ನ ಮಾಡಬೇಕು. ನಮ್ಮ ಕಡೆಯಿಂದ ಏನಾದರೂ ಸಹಾಯ ಬೇಕಾದರೆ ನಾವು ಮಾಡಲು ಸಿದ್ಧವಿದ್ದೇವೆ ಎಂದು ರಾಜ ಮಾತೆ ಪ್ರಮೋದ ದೇವಿ ಒಡೆಯರ್ ಹೇಳಿದ್ದಾರೆ.
ಟೆಕ್ನಿಕಲ್ ಟೀಮ್ ನೀಡಿದ ವರದಿಯಲ್ಲಿ ಏನಿದೆ ಎಂಬುದರ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಹೆರಿಟೇಜ್ ಕಮಿಟಿಯಲ್ಲಿ ರಂಗರಾಜ್ ಬಿಟ್ಟರೆ ಯಾರಿದ್ದಾರೆ ಎಂದು ಗೊತ್ತಿಲ್ಲ. ಬೇರೆಯವರು ಸಿವಿಲ್ ಇಂಜಿನಿಯರ್ಸ್ ಇರುತ್ತಾರೆ. ಅವರಿಗೆ ಪಾರಂಪರಿಕ ಕಟ್ಟಡಗಳನ್ನು ಸುಣ್ಣ ಉಪಯೋಗಿಸಿ ಕಟ್ಟಿರುತ್ತಾರೆ ಎಂಬುದು ಮಾಹಿತಿ ಇರುವುದಿಲ್ಲ. ಈ ಪಾರಂಪರಿಕ ಕಟ್ಟಡಗಳನ್ನು ನೆಲಸಮ ಮಾಡುವ ವಿಚಾರದಲ್ಲಿ ಸಿವಿಲ್ ಇಂಜಿನಿಯರ್ಸ್ ಅಭಿಪ್ರಾಯ ತೆಗೆದುಕೊಳ್ಳುವುದು ತಪ್ಪು ಎಂದರು.
ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್ ಸ್ಟೋನ್ ಬಿಲ್ಡಿಂಗ್ ನೆಲಸಮ ಮಾಡುವ ಬದಲು ಅದನ್ನು ಪಾರಂಪರಿಕ ತಜ್ಞರ ಅಭಿಪ್ರಾಯ ಪಡೆದು ನವೀಕರಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.