ಕರ್ನಾಟಕ

karnataka

ETV Bharat / state

ಎಡ-ಬಲ ಬೇಡ, ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ : ಯದುವೀರ್ - ಪಠ್ಯ ಬದಲಾವಣೆ

ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಲಹೆ ನೀಡಿದರು..

Yaduveer reacts on Karnataka syllabus dispute
ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

By

Published : May 31, 2022, 2:00 PM IST

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಲಹೆ ನೀಡಿದರು.

ರಾಜ್ಯದಲ್ಲಿ ಭುಗಿಲೆದ್ದಿರುವ ಶಾಲಾ ಪಠ್ಯ ವಿವಾದ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದರು.

ಪಠ್ಯ ಪುಸ್ತಕ ವಿವಾದದ ಕುರಿತಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿರುವುದು..

ಪಾರಂಪರಿಕ ಕಟ್ಟಡಗಳ ಉಳಿವಿಗೆ ಟೆಂಡರ್ ಪ್ರಕ್ರಿಯೆ ಬದಲಾಗಬೇಕು. ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡುವುದು ಅಂತಾ ಅಷ್ಟೇ ಇದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು.

ಪುನಶ್ವೇತನಕ್ಕೆ ಅನುಮತಿ ಸಿಗುತ್ತಿಲ್ಲ. ಅದು ಕೂಡ ಸರಿಯಾಗಬೇಕಿದೆ. ಆಯುರ್ವೇದಿಕ್ ಆಸ್ಪತ್ರೆ ಚೆನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು ಎಂದರು.

ಇದನ್ನೂ ಓದಿ:ಮಠದಲ್ಲಿ ನೀರಿನ ಕೊರತೆ, ಆನೆಗೆ ಪ್ರತಿನಿತ್ಯ ಗ್ಯಾರೇಜ್‌ನಲ್ಲೇ ಸ್ನಾನ- ವಿಡಿಯೋ

ABOUT THE AUTHOR

...view details