ಮೈಸೂರು:ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿರುವುದರಿಂದ ರಾಜ್ಯದಲ್ಲಿ ಇಂತಹ ಸ್ಥಿತಿ ಬಂದೊದಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಯತೀಂದ್ರ ಸಿದ್ದರಾಮಯ್ಯ - ಮೈಸೂರು ಲೇಟೆಸ್ಟ್ ನ್ಯೂಸ್
ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ತಿ. ನರಸೀಪುರ ತಾಲೂಕಿನ ಕೂಡ್ಲೂರು ಗ್ರಾಮದ ಕೋವಿಡ್ ಆಸ್ಪತ್ರೆಗೆ ಉಚಿತವಾಗಿ ಎರಡು ಆ್ಯಂಬುಲೆನ್ಸ್ ಹಾಗೂ ಬೆಡ್ ನೀಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ ಕೋವಿಡ್ ಆಸ್ಪತ್ರೆಗಳಿಗೆ ಔಷಧಿ, ಮಾತ್ರೆಗಳ ಕೊರತೆ ಬಗ್ಗೆ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಔಷಧಿ, ಮಾತ್ರೆಗಳನ್ನು ತಲುಪಿಸುವ ಕಾರ್ಯ ಮಾಡುತ್ತೇವೆ. ಸರ್ಕಾರದ ಸಹಾಯವಿಲ್ಲದೆ ನನ್ನ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದೇನೆ ಎಂದರು.
ವರುಣ ಕ್ಷೇತ್ರ ವ್ಯಾಪ್ತಿಯ ಎಲ್ಲ ಕೋವಿಡ್ ಸೆಂಟರ್ಗಳಿಗೆ ಉಚಿತವಾಗಿ ಬೆಡ್ ನೀಡಿದ್ದೇನೆ. ಕೂಡ್ಲೂರು ಕೋವಿಡ್ ಆಸ್ಪತ್ರೆಗೂ 30 ಬೆಡ್ ವಿತರಣೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಜನರಿಗೆ ಅಭಯ ನೀಡಿ, ಧೈರ್ಯ ಹೇಳುತ್ತಿರುವುದಾಗಿ ತಿಳಿಸಿದರು.