ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ. ಅವರನ್ನು ಪಕ್ಷದಲ್ಲಿಯೇ ಮೂಲೆಗುಂಪು ಮಾಡಬೇಕು ಎಂಬ ಉದ್ದೇಶದಿಂದ ಮೂವರನ್ನು ಡಿಸಿಎಂ ಮಾಡಲಾಗಿದೆ ಎಂದು ವಾಟಳ್ ಪಕ್ಷದ ಅಧ್ಯಕ್ಷ ವಾಟಲ್ ನಾಗರಾಜ್ ಹೇಳಿದ್ದಾರೆ.
ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ: ವಾಟಾಳ್ ನಾಗರಾಜ್ - vatal nagrajnews
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ ಎಂದು ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಹೇಳಿದ್ದಾರೆ.
ಮೈಸೂರು ರೈಲ್ವೆ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸಂವಿಧಾನದಲ್ಲಿ ಇಲ್ಲ. ಆದರೆ, ಬಿಎಸ್ವೈ ಅವರನ್ನು ಮೂಲೆಗುಂಪು ಮಾಡಲು ರಚನೆ ಮಾಡಲಾಗಿದೆ ಎಂದರು. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸೆ. 7ರಂದು ಆಗಮಿಸುತ್ತಿದ್ದಾರೆ. ಅವರು ಅಂದು ನೆರೆ ಸಂತ್ರಸ್ತ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ಘೋಷಣೆ ಮಾಡಬೇಕು. ಇಲ್ಲವಾದರೆ ಕರ್ನಾಟಕ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಿಪ್ಪು ಎಕ್ಸ್ಪ್ರೆಸ್ ರೈಲಿಗೆ ಮರುನಾಮಕರಣ ಮಾಡಬಾರದು. ಟಿಪ್ಪು ಸುಲ್ತಾನ್ ಅಪ್ಪಟ ದೇಶಭಕ್ತ. ದೇಶಕ್ಕಾಗಿ ಕೊಡುಗೆ ನೀಡಿದ್ದಾರೆ ಎಂದರು.