ಕರ್ನಾಟಕ

karnataka

ETV Bharat / state

ಯಡಿಯೂರಪ್ಪನವರು ಒಬ್ಬ ದುರ್ಬಲ ಮುಖ್ಯಮಂತ್ರಿ.. ಸಿದ್ದರಾಮಯ್ಯ ವಾಗ್ದಾಳಿ

ಮಂಗಳೂರಿನಲ್ಲಿ ನಡೆದ ಗೋಲಿಬಾರ್​ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ನಿಜವಾದ ಅಪರಾಧಿಗಳು ಎಂದು ಕಟುವಾಗಿ ಟೀಕಿಸಿದ್ದಾರೆ.

Siddaramaiah
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

By

Published : Dec 20, 2019, 7:09 PM IST

ಮೈಸೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ನಿಜವಾದ ಅಪರಾಧಿಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟುವಾಗಿ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಯಡಿಯೂರಪ್ಪನವರು ಒಬ್ಬ ದುರ್ಬಲ ಮುಖ್ಯಮಂತ್ರಿಗಳು. ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿ ಬಿಜೆಪಿಯ ದೆಹಲಿ ನಾಯಕರು ಮತ್ತು ಸಂಘ ಪರಿವಾರದ ನಾಯಕರು ರಾಜ್ಯಭಾರ ನಡೆಸುತ್ತಿದ್ದಾರೆ. ಯಡಿಯೂರಪ್ಪನವರು ಆರ್​ಎಸ್​ಎಸ್ ಹೇಳಿದ ಹಾಗೆ ಕೇಳುವ ಒಬ್ಬ ಕೈಗೊಂಬೆಯಾಗಿದ್ದಾರೆ. ಅವರಿಗೆ ಆತ್ಮಸಾಕ್ಷಿಯೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪನವರು ಒಬ್ಬ ದುರ್ಬಲ ಮುಖ್ಯಮಂತ್ರಿ.. ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಕಿಡಿ

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೇ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಸಾವು ನೋವುಗಳ ಹಿಂದಿರುವ ನಿಜವಾದ ಅಪರಾಧಿಗಳು. ಒಬ್ಬ ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ಕರೆದು ಲಾಠಿ ಪ್ರಹಾರ ನಡೆಸದಂತೆ ಆದೇಶ ನೀಡುತ್ತಾರೆ. ಆದರೂ ಪೊಲೀಸರು ಗುಂಡು ಹಾರಿಸಿ ಸಾಯಿಸುತ್ತಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲವೇ? ಶಾಂತಿಯುತವಾಗಿ ಪ್ರತಿಭಟಿಸಲು ಸ್ವಇಚ್ಛೆಯಿಂದ ಸಾರ್ವಜನಿಕರು ಮುಂದಾದಾಗ ಅದಕ್ಕೆ ಅವಕಾಶ ಕೊಟ್ಟಿದ್ದರೆ ಈಗಿನ ಯಾವ ಅನಾಹುತವೂ ಸಂಭವಿಸುತ್ತಿರಲಿಲ್ಲ.

ರಾಜ್ಯ ಸರ್ಕಾರ ಬುಧವಾರ ರಾತ್ರಿ ಇದ್ದಕ್ಕಿದ್ದಂತೆ ಸೆಕ್ಷನ್​ 144 ಅನ್ವಯ ನಿಷೇಧಾಜ್ಞೆ ಹೇರಿ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದಂತೆ ಮಾಡಿತು. ಇದರಿಂದ ಕೆರಳಿದ ಜನ ಬೀದಿಗಿಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಪ್ರತಿಭಟನೆ ಮಾಡುವುದಾದರೆ ಉತ್ತರ ಭಾರತಕ್ಕೆ ಹೋಗಿ ಎಂದು ಜನರಿಗೆ ಹೇಳುತ್ತಾರೆ. ಅಲ್ಲೇನು ಪ್ರತಿಭಟನೆಗೆ ವಿಶೇಷ ವ್ಯವಸ್ಥೆ ಇದೆಯೇ? ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲವೇ? ಜನರನ್ನು ಭಯಪಡಿಸಿ, ಪ್ರತಿಭಟನೆಯಿಂದ ದೂರ ಸರಿಯುವಂತೆ ಮಾಡಲು ಹೊರಟಿರುವುದು ಸರ್ಕಾರದ ಮೂರ್ಖತನ ಎಂದು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

ಕೆಲವು ದಿನಗಳ ಹಿಂದೆ ಬಂಟ್ವಾಳದಲ್ಲಿ ಆರ್​ಎಸ್​ಎಸ್​ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರ ಶಾಲೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಾಟಕ ಪ್ರದರ್ಶಿಸಲಾಯಿತು. ಆ ಪ್ರದರ್ಶನಕ್ಕೆ ಪೊಲೀಸ್ ಅಧಿಕಾರಿಗಳು ಸೇರಿ ಇಡೀ ಜಿಲ್ಲಾಡಳಿತ ಸಾಕ್ಷಿಯಾಗಿತ್ತು. ಅದೇ ಕಲ್ಲಡ್ಕ ಪ್ರಭಾಕರ ಭಟ್ಟರ ಪ್ರಚೋದನಾಕಾರಿ ಹೇಳಿಕೆಗಳೇ ನಿನ್ನೆಯ ಹಿಂಸಾಚಾರಕ್ಕೆ ಕಾರಣ. ಸಂಘ ಪರಿವಾರದ ನಾಯಕರು ಪೊಲೀಸರನ್ನು ಕೈವಶ ಮಾಡಿಕೊಂಡು ಸಾಕಷ್ಟು ಪೂರ್ವ ತಯಾರಿಯೊಂದಿಗೆ ನಿನ್ನೆಯ ಹಿಂಸಾಚಾರ ನಡೆಸಿದ್ದಾರೆ. ಇದರ ಹಿಂದೆ ಬಿಜೆಪಿ ನಾಯಕರು, ಸಂಘಪರಿವಾರದ ನೇರ ಕೈವಾಡವಿದೆ. ಇಲ್ಲದಿದ್ದರೆ ಶಾಂತ ರೀತಿಯ ಪ್ರತಿಭಟನೆ ಗೋಲಿಬಾರ್​ಗೆ ತಿರುಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಬುಧವಾರ ರಾತ್ರಿ ಇದ್ದಕ್ಕಿದ್ದಂತೆ ಸೆಕ್ಷನ 144 ಅನ್ವಯ ನಿಷೇಧಾಜ್ಞೆ ಹೇರಿ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದಂತೆ ಮಾಡಿತು. ಇದರಿಂದ ಕೆರಳಿದ ಜನ ಬೀದಿಗಿಳಿದಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ABOUT THE AUTHOR

...view details