ಮೈಸೂರು: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡುವುದು ಬಿಡುವುದು ಅವರಿಷ್ಟ, ಅದನ್ನು ಕೇಳಲು ಇವರ್ಯಾರು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ರಾಮಮಂದಿರಕ್ಕೆ ದೇಣಿಗೆ ನೀಡಲ್ಲ ಎಂಬ ಹೇಳಿಕೆ ವಿಚಾರವಾಗಿ ತಿ.ನರಸೀಪುರ ತಾಲೂಕಿನಲ್ಲಿ ಪ್ರತಿಕ್ರಿಯಿಸಿದ ಅವರು, ದೇಣಿಗೆ ಎಂಬುದು ಸ್ವ ಇಚ್ಛೆಯಿಂದ ನೀಡುವುದು. ರಾಮಮಂದಿರಕ್ಕೆ ದೇಣಿಗೆ ನೀಡಲ್ಲ ಎಂದಿದ್ದಕ್ಕೆ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಸಿದ್ದರಾಮಯ್ಯ ಅವರು ನಾನು ಎಲ್ಲಾ ದೇವಸ್ಥಾನಗಳಿಗೆ ದೇಣಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಅನೇಕ ದೇವಸ್ಥಾನಗಳಿಗೆ ವೈಯಕ್ತಿಕವಾಗಿ ದೇಣಿಗೆ ಕೊಟ್ಟಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣಕ್ಕೆ ಯಾರು ದುಡ್ಡು ಕೊಟ್ಟಿದ್ದಾರೆ, ಕೊಟ್ಟಿಲ್ಲ ಎಂದು ಕೇಳುವುದು ಸರಿಯಲ್ಲ.