ಕರ್ನಾಟಕ

karnataka

ETV Bharat / state

ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೈಸೂರಿನ ಯುವಕ.. 9 ಮಂದಿಗೆ ಜೀವದಾನ

ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಮದನ್ ಕುಮಾರ್​​ ಎಂಬ ಯುವಕನ ಕುಟುಂಬಸ್ಥರು ಆತನ ಅಂಗಾಂಗ ದಾನ ಮಾಡುವ ಮೂಲಕ ಸಾವಿನ ನೋವಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Madan Kumar
ಮದನ್ ಕುಮಾರ್

By

Published : Oct 9, 2022, 12:06 PM IST

ಮೈಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ 9 ಮಂದಿಗೆ ಜೀವದಾನ ಮಾಡಲಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮುನೇಶ್ವರ ನಗರದ ನಿವಾಸಿ ಮದನ್ ಕುಮಾರ್(25) ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿತ್ತು. ಇವರಿಂದ ಪಡೆದ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳಿಂದ 9 ಮಂದಿಯ ಜೀವವನ್ನು ವೈದ್ಯರು ಉಳಿಸಿದ್ದಾರೆ.

ಅಷ್ಟಕ್ಕೂ ಆಗಿದ್ದೇನು..? ಸಿದ್ದಾರ್ಥ ಬಡಾವಣೆಯ ರಸ್ತೆಯಲ್ಲಿ ಅ‌.5ರಂದು ಅಪಘಾತದಿಂದ ಗಾಯಗೊಂಡು ಒದ್ದಾಡುತ್ತಿದ್ದ ಮದನ್​ ಅವರನ್ನು ಸಮೀಪದ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದುದರಿಂದ ಮದನ್ ಕುಮಾರ್ ಅವರನ್ನು ಕುವೆಂಪು ನಗರದಲ್ಲಿರುವ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು‌.

ಗಂಭೀರ ಸ್ಥಿತಿಯಲ್ಲಿದ್ದ ಮದನ್ ಕುಮಾರ್‌ ಅವರನ್ನು ಎರಡು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಮೆದುಳು ನಿಷ್ಕ್ರಿಯವಾಗಿರುವುದನ್ನು ಗಮನಿಸಿದ ಆಸ್ಪತ್ರೆ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದರು. ನಂತರ ಅಂಗಾಂಗ ದಾನದ ಬಗ್ಗೆ ಮದನ್ ಅವರ ಪತ್ನಿಗೆ ಮಾಹಿತಿ ನೀಡಿದರು.

ಅವರು ಒಪ್ಪಿಗೆ ನೀಡಿದ ಬಳಿಕ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳನ್ನು ಕಸಿ ಮಾಡಿ ಮೈಸೂರು, ಬೆಂಗಳೂರಿನ ನಾರಾಯಣ ಹೃದಯಾಲಯ, ನೆಪ್ರೋ ಯೂರಾಲಜಿ, ಕೆ.ಆರ್ ಆಸ್ಪತ್ರೆಗೆ ಆಂಬ್ಯುಲೆನ್ಸ್​ ಮೂಲಕ ರವಾನಿಸಲಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಇದನ್ನೂ ಓದಿ:ಯುವಕನ ಮಿದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ABOUT THE AUTHOR

...view details