ಮೈಸೂರು:ತುಂಬಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಈಜಲು ಹೋದ ಮೂವರು ಯುವಕರಲ್ಲಿ ಓರ್ವ ನೀರಿನ ರಭಸಕ್ಕೆ ಕೊಚ್ಚಿಹೋದ ಘಟನೆ ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ಬಳಿ ನಡೆದಿದೆ. ನದಿಯಲ್ಲಿ ಅಧಿಕ ನೀರು ಹರಿದು ಬರುತ್ತಿದ್ದರೂ ಅಪಾಯ ಲೆಕ್ಕಿಸದೆ ಮೂವರು ಯುವಕರು ಈಜಲು ತೆರಳಿದ್ದರು.
ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು, ಇಬ್ಬರು ಪಾರು - ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು
ಕಪಿಲಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ಕಣ್ಮರೆಯಾಗಿರುವ ಘಟನೆ ನಡೆದಿದೆ.
ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು
ಹೆಜ್ಜಿಗೆ ಸೇತುವೆ ಬಳಿ ಯುವಕರು ನದಿಗೆ ಹಾರಿದ್ದು, ನೀರಿನ ರಭಸಕ್ಕೆ ಅಹಮದ್ ಕರೀಂ ಎಂಬಾತ ನಾಪತ್ತೆಯಾಗಿದ್ದು, ಉಳಿದಿಬ್ಬರು ಈಜಿ ದಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ:ಸುಳ್ಯದಲ್ಲಿ ಹೊಸ ಮನೆ ಮೇಲೆ ಗುಡ್ಡ ಕುಸಿತ: ಗೃಹ ಪ್ರವೇಶದ ಕನಸು ನುಚ್ಚುನೂರು
TAGGED:
youth died in kapila river