ಕರ್ನಾಟಕ

karnataka

ETV Bharat / state

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ.. ಮರ್ಯಾದಾ ಹತ್ಯೆಯ ಶಂಕೆ - ಮೈಸೂರು ದೊಡ್ಡಕಾನ್ಯ ಗ್ರಾಮ

ಮೈಸೂರು ಜಿಲ್ಲೆಯ ದೊಡ್ಡಕಾನ್ಯ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ.

Youth found hanged in Mysuru
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ.. ಮಾರ್ಯಾದಾ ಹತ್ಯೆಯ ಶಂಕೆ

By

Published : Sep 4, 2020, 8:45 PM IST

ಮೈಸೂರು: ಜಿಲ್ಲೆಯ ದೊಡ್ಡಕಾನ್ಯ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ.

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಯುವತಿ ಮೀನಾಕ್ಷಿ (22). ಈಕೆ ದೊಡ್ಡಕಾನ್ಯ ಗ್ರಾಮದ ನಿವಾಸಿಯಾಗಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿರುವುದನ್ನು ಮನೆಯವರು ವಿರೋಧಿಸುತ್ತಿದ್ದರಲ್ಲದೇ ತನಗೆ ಹಿಂಸೆ ನೀಡುತ್ತಿದ್ದರು ಎಂದು ಸ್ವತಃ ಯುವತಿ ಪೊಲೀಸರಿಗೆ ಈ ಹಿಂದೆಯೇ ದೂರು ನೀಡಿದ್ದಳು.

ಆದರೆ, ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ದೇಹ ಪತ್ತೆಯಾಗಿದ್ದು, ಮನೆಯವರೇ ಹತ್ಯೆ ಮಾಡಿರುವ ಶಂಕೆ ವ್ಯಕವಾಗಿದೆ. ಈ ಸಂಬಂಧ ಮೈಸೂರು ದಕ್ಷಿಣ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ABOUT THE AUTHOR

...view details