ಮೈಸೂರು:ಕೇರಳದಲ್ಲಿ ಝಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಹೆಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹೈ ಅಲರ್ಟ್ ಆಗಿದ್ದಾರೆ.
ಮೈಸೂರು ಗಡಿಯಲ್ಲಿ ಹೈ ಅಲರ್ಟ್ ಮೈಸೂರು- ಕೇರಳ ಸಂಪರ್ಕ ಬೆಸೆಯುವ ಬಾವಲಿ ಚೆಕ್ ಪೋಸ್ಟ್ನಲ್ಲಿ ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಪ್ರತಿ ವಾಹನ ಸವಾರರ ತಪಾಸಣೆ ಮಾಡಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಹೊರ ರಾಜ್ಯದಿಂದ ಬರುವ ವಾಹನಗಳ ತಪಾಸಣೆಯನ್ನು ಕಡ್ಡಾಯ ಮಾಡಲಾಗಿದೆ. ಆರ್ಟಿಪಿಸಿಆರ್ ನೆಗೆಟಿವ್ ವರದಿಯಿದ್ದರೆ ಪರಿಶೀಲನೆ ಮಾಡಲಾಗುತ್ತಿದೆ. ಅಲ್ಲದೆ, ಕೋವಿಡ್ ಲಸಿಕೆಯ ಸಂಪೂರ್ಣ ಎರಡು ಡೋಸ್ ಪಡೆದವರಿಗೆ ಮಾತ್ರ ರಾಜ್ಯಕ್ಕೆ ಬಿಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಮೈಸೂರಿನಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ : ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ